Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ

    April 28, 2025
    Share

    ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

    ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು.

    ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು.

    ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ಹೇಳಿ ವೇದಿಕೆಗೆ ಬರುವಂತೆ ಹೇಳಿದ್ದಾರೆ. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದ್ದಾರೆ.

    ನಂತರ ಸಚಿವ ಎಂಬಿ ಪಾಟೀಲ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದರು.

    Post Views: 151

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.