Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು: ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

    April 30, 2024
    Share

    ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರ ಕೈಗೊಳ್ಳಲಾಗಿದೆ.

    ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

    ಷರತ್ತುಗಳು:
    ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೆÇಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

    ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    Post Views: 169

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.