ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ.
ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಕಾಲೇಜಿನಿಂದ ಮನೆಗೆ ನೇರವಾಗಿ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.