Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪೊಲೀಸ್‌ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ- ಮೂವರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಪೊಲೀಸ್‌ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ- ಮೂವರ ಬಂಧನ

    August 22, 2025
    Share

    ಉಡುಪಿ: ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಾರಿಗೆ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಉಜಿರೆಯ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ, ಸಹನ್ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಿಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನಲೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಅರೆಸ್ಟ್ ಮಾಡಿದ್ದರು. ಅವರನ್ನು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುತಿದ್ದಾಗ, ಅವರ ಬೆಂಬಲಿಗರನ್ನೆಲಾದ ಕೆಲವರು ಪೊಲೀಸ್ ವಾಹನ ಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು, ಎಷ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸದಂತೆ ಸೂಚನೆ ನೀಡಿದರೂ ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನಕ್ಕೆ ಬೆಂಬಲಿಗರ ಕಾರು ಡಿಕ್ಕಿ ಹೊಡೆದಿದೆ. ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಈ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಜಿರೆ ನಿವಾಸಿ ಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ದಸ್ತಗಿರಿ ಮಾಡಿದ್ದು, ಅವರ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 128

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.