Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    August 29, 2025
    Share

    ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಗೆ ಉಡುಪಿ ನ್ಯಾಯಾಲಯ ಆ.28 ರಂದು ಜಾಮೀನು ಮಂಜೂರು ಮಾಡಿದೆ.

    ಪ್ರಕರಣ ವಿವರ: ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA-20-G-0669  ವಾಹನಕ್ಕೆ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದರಿಂದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗನ್ ಮ್ಯಾನ್ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಆ 21 ರಂದು ಪ್ರಕರಣ ದಾಖಲಾಗಿತ್ತು.

    ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆ.28 ರಂದು ಉಡುಪಿ ಕೋರ್ಟ್ ನಿಂದ ಮೂವರಿಗೂ ಜಾಮೀನು ಮಂಜೂರು ಮಾಡಲಾಗಿದ್ದು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

    Post Views: 126

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.