Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

    December 27, 2022
    Share

    ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ.

    ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಂ ಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ, ಆಕೆ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ನೀಡಿದ್ದು, ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ,

    ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್ , ಮೊದಲಾದವರು ಆಗಮಿಸಿದ್ದು ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ. ಈಕೆ ತಂದೆ, ತಾಯಿ ರೀನಾರನ್ನು ಅಗಲಿದ್ದಾರೆ.

    Post Views: 220

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.