Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    December 3, 2023
    Share

    ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ ರುಕಿಯಾ (23) ಹಾಗೂ ನಾಲ್ಕುವರೆ ತಿಂಗಳ ಶಿಶು ಅಬ್ದುಲ್ಲಾ ಹೂದ್ ಮೃತಪಟ್ಟವರು. ಫಾತಿಮಾ ರುಕಿಯಾರಿಗೆ ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬುವರೊಂದಿಗೆ ವಿವಾಹವಾಗಿತ್ತು. ಈ ದಂಪತಿಗೆ ಅಬ್ದುಲ್ಲಾ ಹೂದ್ ಎಂಬ ನಾಲ್ಕುವರೆ ತಿಂಗಳ ಗಂಡು ಶಿಶು ಇದೆ. ಫಾತಿಮಾ ರುಕಿಯಾ ಹೆರಿಗೆಯ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅಲ್ಲದೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು. ಆದ್ದರಿಂದ ಫಾತಿಮಾ ರುಕಿಯಾರಿಗೆ ಮಾನಸಿಕ ವೈದ್ಯರಿಂದ ಚಿಕಿತ್ಸೆ ಕೊಡಿಸುತ್ತಿದ್ದರು. ಶನಿವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಫಾತಿಮಾ ರುಕಿಯಾ ಈ ಕೃತ್ಯ ಎಸಗಿದ್ದಾರೆ. ಅವರು ಫ್ಲ್ಯಾಟ್ ನ ಬೆಡ್ ರೂಮ್ ಗ್ಯಾಲರಿಯಲ್ಲಿ ತಮ್ಮ ನಾಲ್ಕುವರೆ ತಿಂಗಳ ಶಿಶುವನ್ನು ಪ್ಲಾಸ್ಟಿಕ್ ಟಬ್ ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ತಾನು ಕೂಡಾ ಕೊಠಡಿಯ ಕಿಟಕಿಗೆ ಸೀರೆ ಬಿಗಿದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 216

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.