Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು
    ಇತ್ತೀಚಿನ ಸುದ್ದಿ

    ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

    May 24, 2023
    Share

    ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ಯರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

    ಹರೀಶ್ ಪುಂಜಾ ಹೇಳಿದ್ದೇನು?

    ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು.24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ  ಕಾಂಗ್ರೆಸ್ ಕಾರ್ಯಕರ್ತರ ಆಕ್ರೊಶಕ್ಕೆ ಕಾರಣವಾಗಿದ್ದು, ಇದು ಮುಂದೆ ಯಾವ ಹಂತಕ್ಕೆ ಮುಟ್ಟಲಿದೆ ಎಂದು ಕಾದುನೋಡಬೇಕಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.