Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿ ಅವಾಂತರ- ಉರುಳಿದ ಕಂಬ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿ ಅವಾಂತರ- ಉರುಳಿದ ಕಂಬ

    January 19, 2024
    Share

    ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಯೊಂದು ವಿದ್ಯುತ್‌ ತಂತಿಗಳಿಗೆ ಸಿಲುಕಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎನ್ನುವಲ್ಲಿ ಬುಧವಾರ ತಡರಾತ್ರಿ ನಡೆದಿದೆ.

    ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ಲಾರಿಯ ಚಾಲಕ ಮೇಲ್ಭಾಗದಲ್ಲಿದ್ದ ವಿದ್ಯುತ್‌ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ.

    ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದೆ ಸಾಗಿದ್ದಾನೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಕುಷ್ಟಗಿಯ ಕುಮಾರ್‌ನನ್ನು ವೇಣೂರು ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ಮೆಸ್ಕಾಂ ಎಂಜಿನಿಯರ್‌, ವೇಣೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ವಾಹನಗಳ ಸಂಚಾರಕ್ಕೆ ಅಡಚಣೆ
    ಘಟನೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. 15 ವಿದ್ಯುತ್‌ ಪರಿವರ್ತಕಗಳ ವ್ಯಾಪ್ತಿಯ 800ಕ್ಕಿಂತ ಅಧಿಕ ಗ್ರಾಹಕರಿಗೆ ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಉಂಟಾಯಿತು. ಘಟನೆ ರಾತ್ರಿ ನಡೆದ ಕಾರಣ ಹಾಗೂ ತತ್‌ಕ್ಷಣ ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದರಿಂದ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ.

    ಘಟನೆಯಿಂದ ಮೆಸ್ಕಾಂಗೆ 70,000 ರೂ.ಗಿಂತ ಅಧಿಕ ನಷ್ಟ ಉಂಟಾಗಿದ್ದು, ಅದನ್ನು ಗುತ್ತಿಗೆ ಕಂಪೆನಿ ವತಿಯಿಂದ ಭರಿಸಲಾಗುವುದು ಎಂದು ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದೆ. ಸದ್ಯಕ್ಕೆ ಕಂಬಗಳು ಮುರಿದ ಜಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಕೈಗೊಂಡಿದ್ದು, ವಿದ್ಯುತ್‌ ಪೂರೈಕೆ ಮಾಡಲಾಗಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.