ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷದ ಬಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು ಎಂಬುದಿಲ್ಲಿ ಗಮನಾರ್ಹ.
ಚಿನ್ನಯ್ಯನಿಗೆ ಕೋರ್ಟ್ ಹಾಕಿರುವ ಷರತ್ತುಗಳು
ಮುಂದೆ ಇದೇ ರೀತಿಯ ಅಪರಾಧಕ್ಕೆ ಕೈ ಹಾಕಬಾರದು
ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಓಡಿಹೋಗುವುದು, ಸ್ಥಳ ಬಿಟ್ಟು ಮರೆಮಾಡಿಕೊಳ್ಳುವುದು ಬೇಡ
Prosecution witnesses ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರುವ ಕೆಲಸ ಮಾಡಬಾರದು
ಕೇಸಿಗೆ ಸಂಬಂಧಿಸಿದ ದಾಖಲೆ ಅಥವಾ ಪುರಾವೆಗಳನ್ನು ಅಳಿಸುವುದು / ನಾಶಗೊಳಿಸುವುದು ಬೇಡ
IO (Investigating Officer) ಕರೆ ಮಾಡಿದಾಗ ಹಾಜರಾಗಬೇಕು, ತನಿಖೆಗೆ ತೊಂದರೆ ಕೊಡಬಾರದು
ಕೋರ್ಟ್ ದಿನಾಂಕಗಳಿಗೆ ತಪ್ಪದೇ ಹಾಜರಾಗಬೇಕು. ಕೋರ್ಟ್ ಮನ್ನಿಸಿದಾಗ ಮಾತ್ರ ಹಾಜರಾಗದೇ ಇರಬಹುದು
ಚಿನ್ನಯ್ಯ ಹಾಗೂ ಜಾಮೀನಾದರೂ ಕೂಡ ಆಧಾರ್, ಮತದಾರರ ಗುರುತಿನ ಚೀಟಿಯ ಪುರಾವೆ ಕೊಡಬೇಕು
ವಿಳಾಸದಲ್ಲಿ ಬದಲಾವಣೆ ಬಂದರೆ ಕೋರ್ಟ್‌ಗೆ ತಿಳಿಸಬೇಕು
ಮೊಬೈಲ್ ನಂಬರ್ / ವಾಟ್ಸ್ಯಾಪ್ / ಇಮೇಲ್ ಮಾಹಿತಿ ಕೊಡಬೇಕು
Court jurisdictionnನಿಂದ ಹೊರಗೆ ಹೋಗಬಾರದು
ಕೇಸ್ ಬಗ್ಗೆ ಮಾಧ್ಯಮಕ್ಕೆ ಮಾತನಾಡಬಾರದು
ಬೇಲ್ ಮೇಲೆ ಬಿಡುಗಡೆ ಆದ ನಂತರ ಬದಲಿ ದಿನಗಳಲ್ಲಿ (ದಿನ ಬಿಟ್ಟು ದಿನ) ಪೊಲೀಸ್ ಠಾಣೆಗೆ ಹಾಜರಾಗಬೇಕು




