ಮಣಿಪಾಲ: ನಗರದ ಟೈಗರ್ ಸರ್ಕಲ್ ಖಾಸಗಿ ಬಸ್ ನಿಲ್ದಾಣದ ಬಳಿ ಟೈಮಿಂಗ್ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಇರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುವ ಟೈಮಿಂಗ್ ವಿಚಾರದಲ್ಲಿ ಆನಂದ್ ಬಸ್ ನ ಕಂಡಕ್ಟರ್ ವಿಜಯ ಕುಮಾರ್ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್ ಆಲ್ಪಾಜ್ ನಡುವೆ ಗಲಾಟೆ ನಡೆದಿದೆ.ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.
ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್ ಆಲ್ಪಾಜ್(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್ ವಿಜಯಕುಮಾರ್(25), ಚಿತ್ರದುರ್ಗ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಸ್ಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.