Facebook Twitter Instagram
    Saturday, July 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ-ಖಾಸಗಿ ಬಸ್ ಕಂಡಕ್ಟರ್ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ-ಖಾಸಗಿ ಬಸ್ ಕಂಡಕ್ಟರ್ ಬಂಧನ

    July 11, 2026
    Share

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆ, ಕರ್ವೇಲು, ಉಪ್ಪಿನಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಸೆಲೇನ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

    ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

    ಈ ಸಂಬಂಧ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 9

    Related Posts

    ಉಡುಪಿ: ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ- ಮಹಿಳೆ ಅರೆಸ್ಟ್

    July 11, 2026

    ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

    July 11, 2026

    ಮಂಗಳೂರು: ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ- 6.42 ಲಕ್ಷ ರೂ. ಕಳೆದುಕೊಂಡ ಯುವತಿ

    July 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ- ಮಹಿಳೆ ಅರೆಸ್ಟ್

    July 11, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ-ಖಾಸಗಿ ಬಸ್ ಕಂಡಕ್ಟರ್ ಬಂಧನ

    July 11, 2026

    ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

    July 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.