Facebook Twitter Instagram
    Monday, August 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಲಭೆ ಎಬ್ಬಿಸಲು ಸಂಚು: ವಿದೇಶಿ ವ್ಯಕ್ತಿ ಜೊತೆ ಸಂಪರ್ಕ ಹೊಂದಿದ್ದ ಯುವಕನ ಬಂಧನ
    ಇತ್ತೀಚಿನ ಸುದ್ದಿ

    ಗಲಭೆ ಎಬ್ಬಿಸಲು ಸಂಚು: ವಿದೇಶಿ ವ್ಯಕ್ತಿ ಜೊತೆ ಸಂಪರ್ಕ ಹೊಂದಿದ್ದ ಯುವಕನ ಬಂಧನ

    August 9, 2026
    Share

    ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ರಾಯಚೂರಿನ ಯುವಕನನ್ನು ಸದರ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಶಾಹಿಲ್ (24) ಎಂದು ಗುರುತಿಸಲಾಗಿದ್ದು, ಈತ ರಾಯಚೂರಿನಲ್ಲಿ ಟೀ ಸ್ಟಾಲ್ ನಡೆಸುತ್ತಿದ್ದ ಎನ್ನಲಾಗಿದೆ.

    ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ‘ರಾಣಾ ಭಾಯ್’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಶಾಹಿಲ್ ವಿದೇಶಿ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಆ ಖಾತೆಯಲ್ಲಿನ ಕೆಲವು ಪೋಸ್ಟ್‌ಗಳನ್ನು ಲೈಕ್ ಮಾಡುವುದರ ಜೊತೆಗೆ ಕಮೆಂಟ್ ಹಾಗೂ ಶೇರ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ವೇಳೆ, ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳಿಂದ ಪ್ರಭಾವಿತನಾಗಿದ್ದ ಶಾಹಿಲ್, ರಾಣಾ ಭಾಯ್‌ಗೆ ಸಂದೇಶ ಕಳುಹಿಸಿ ಪಿಸ್ತೂಲ್‌ಗಾಗಿ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

    ವಿದೇಶಿ ವ್ಯಕ್ತಿ ಶಾಹಿಲ್‌ನ ವಾಟ್ಸ್‌ಆ್ಯಪ್ ಸಂಖ್ಯೆಯನ್ನು ಪಡೆದುಕೊಂಡಿದ್ದ ಎನ್ನಲಾಗಿದ್ದು, ಜುಲೈ 14ರಿಂದ ಇಬ್ಬರ ನಡುವೆ ಹಲವು ವಿಚಾರಗಳ ಕುರಿತು ಸಂಭಾಷಣೆ ನಡೆದಿರುವುದು ಪೊಲೀಸರ ಗಮನಕ್ಕೆ ಬಂದಿದೆ.

    ಗಲಭೆ ಎಬ್ಬಿಸುವಂತೆ ಶಾಹಿಲ್‌ಗೆ ಪ್ರಚೋದನೆ ನೀಡಲಾಗಿದ್ದು, ಇದಕ್ಕಾಗಿ ಹಣ ಹಾಗೂ ಪಿಸ್ತೂಲ್ ನೀಡುವುದಾಗಿ ಭರವಸೆ ನೀಡಿದ್ದ ಎನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದ ಆರೋಪದಡಿ ಸದರ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಲಭೆ ಎಬ್ಬಿಸುವ ಸಂಚಿನಲ್ಲಿ ಶಾಹಿಲ್ ಬೇರೆ ಯಾರನ್ನಾದರೂ ಸಂಪರ್ಕಿಸಿದ್ದಾನೆಯೇ? ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪ್ರಕರಣದ ತನಿಖೆ ಮುಂದುವರಿದಿದ್ದು, ಸಾಮಾಜಿಕ ಜಾಲತಾಣದ ಮೂಲಕ ನಡೆದಿರುವ ಸಂಪರ್ಕದ ಸ್ವರೂಪ ಹಾಗೂ ವಿದೇಶಿ ವ್ಯಕ್ತಿಯ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 11

    Related Posts

    ಜಗಳ ಬಿಡಿಸಲು ಬಂದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಅರೆಸ್ಟ್

    August 10, 2026

    ಸ್ಟಾರ್ ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ

    August 9, 2026

    ಸ್ಟಾರ್‌ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಅವಧಿ ಮೀರಿದ ಹಾಲು, ಮಾಂಸ, ಮೀನು ಪತ್ತೆ!

    August 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜಗಳ ಬಿಡಿಸಲು ಬಂದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಅರೆಸ್ಟ್

    August 10, 2026

    ಗಲಭೆ ಎಬ್ಬಿಸಲು ಸಂಚು: ವಿದೇಶಿ ವ್ಯಕ್ತಿ ಜೊತೆ ಸಂಪರ್ಕ ಹೊಂದಿದ್ದ ಯುವಕನ ಬಂಧನ

    August 9, 2026

    ಸ್ಟಾರ್ ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ

    August 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.