ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.