Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂವಿಧಾನ ಜಾಗೃತಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಂವಿಧಾನ ಜಾಗೃತಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ

    February 6, 2024
    Share

    ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.

    ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ಅವರು ಜಂಟಿಯಾಗಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ವಿವಿಧ ತಂಡಗಳನ್ನು ರಚಿಸಿಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿನಾಟಕಗಳ ಮೂಲಕ ಜನರಿಗೆ ಸಂವಿಧಾನ ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಿದರು.ಈಗಾಗಲೇ ಸಂವಿಧಾನ ಜಾಗೃತಿ ಜಾಥಾಕ್ಕೆ ವಿವಿಧ ಕಡೆ ಉತ್ತಮ ಸ್ಪಂದನೆ ದೊರಕಿದೆ. ಈ ಜಾಗೃತಿ ಜಾಥಾದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ ತಂಡಗಳ ಪ್ರದರ್ಶನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಇನ್ನು ಸೈಯದ್‌ ಅವರನ್ನು ನೂತನ ಪ್ರಧಾನಿಯ ಸಲಹೆಗಾರರನ್ನಾಗಿ ನೇಮಕಗೊಳಿಸಲಾಗಿದೆ. ಮುಬಾರಕ್‌ ಅಮೆರಿಕದಲ್ಲಿನ ಯೆಮಾನ್‌ ರಾಯಭಾರಿಯಾಗಿದ್ದರು.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.