Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು..! ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು..! ಮಹಿಳೆ ಸಾವು

    October 14, 2024
    Share

    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಹಾಗೂ ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.