Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ
    ಇತ್ತೀಚಿನ ಸುದ್ದಿ

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026
    Share

    ಕುಂದಾಪುರ: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ (CEO) ಕರ್ತವ್ಯ ನಿರ್ವಹಿಸುತ್ತಿದ್ದ ಕಟ್‌ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಅವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮೃತರ ಸಹೋದರ ರಾಜೇಶ್‌ ಜೋಗಿ (42) ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಟ್‌ಬೆಲ್ತೂರು ಗ್ರಾಮದ ನಿವಾಸಿಯಾಗಿದ್ದ ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟೆಂಬರ್ 24 ರಂದು ಮಧ್ಯಾಹ್ನ ಸುಮಾರು 12:30 ರ ವೇಳೆಗೆ ರಾಘವೇಂದ್ರ ಜೋಗಿ ಅವರು ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕುಟುಂಬಸ್ಥರು ಗಮನಿಸಿದ್ದಾರೆ.

    ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮಧ್ಯಾಹ್ನ 1:19 ರ ವೇಳೆಗೆ ರಾಘವೇಂದ್ರ ಜೋಗಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
    ಘಟನೆ ನಡೆದ ಬಳಿಕ ಮೃತರ ಮನೆಯನ್ನು ಪರಿಶೀಲಿಸಿದಾಗ ಡೆತ್ ನೋಟ್ (Death Note) ಒಂದೇ ಸಿಕ್ಕಿದ್ದು, ಅದರಲ್ಲಿ ‘ತನ್ನ ಸಾವಿಗೆ ತಾನೇ ಕಾರಣ’ ಎಂದು ಬರೆದಿಡಲಾಗಿದೆ. ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಅಥವಾ ಇತರ ವಿಚಾರಗಳಿಂದ ತೀವ್ರ ಮನನೊಂದು ಸೆಪ್ಟೆಂಬರ್ 24 ರ ಬೆಳಿಗ್ಗೆ 09:45 ರಿಂದ ಮಧ್ಯಾಹ್ನ 12:30 ರ ನಡುವಿನ ಅವಧಿಯಲ್ಲಿ ಅವರು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಕ್ರಮಾಂಕ 31/2026 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಲಂ 194 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 3

    karnataka PoliceInvestigation

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.