ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ.
- ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
- ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
- ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
- ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
- ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
- ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
- ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.
- ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.




