Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ
    ಇತ್ತೀಚಿನ ಸುದ್ದಿ

    ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ

    May 27, 2025
    Share

    ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ.

    • ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
    • ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
    • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
    • ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
    • ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
    • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
    • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.
    • ಕಳೆದ ಜನವರಿಯಿಂದಲೂ

    ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

    Post Views: 184

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.