Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026
    Share

    ಪುತ್ತೂರು: ಕಣಿಯೂರು ಗ್ರಾಮದ ಅಡೆಂಜದಲ್ಲಿ ಪತ್ತೆಯಾದ ನಕಲಿ ನೋಟು ಮುದ್ರಣ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ಶಕೀಲ್ ಹಾಗೂ ಬಂಧಿತ ಆರೋಪಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಂದೀಪ್ ಪುಂಡಲೀಕ್ ಶೋಳಂಬಿ ವಾಸವಾಗಿದ್ದ ಪಿಲಿಚಂಡಿಕಲ್ಲಿನ ಬಾಡಿಗೆ ಮನೆಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಪ್ರಿಂಟರ್, ರಾಸಾಯನಿಕ ದ್ರಾವಣವಿದ್ದ ಬಾಟಲಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಜುಲೈ 16ರಂದು ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಇದ್ರೀಸ್ ಎಂಬುವರಿಗೆ ಸೇರಿದ ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ನಕಲಿ ಕರೆನ್ಸಿ ನೋಟುಗಳು ಹಾಗೂ ಅವುಗಳನ್ನು ಮುದ್ರಿಸಲು ಬಳಸಲಾಗುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ನಡೆದ ತನಿಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಬೆಳಕಿಗೆ ಬಂದಿದೆ.ಈ ಪ್ರಕರಣದಲ್ಲಿ ಇದುವರೆಗೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಕಸಬಾ ಗ್ರಾಮದ ಇಬ್ರಾಹಿಂ (60), ಕಾಸರಗೋಡು ಜಿಲ್ಲೆಯ ಚಂಗುಲ ಗ್ರಾಮದ ಶರೀಫ್ (51), ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಂದೀಪ್ ಪುಂಡಲೀಕ ಶೋಳಂಬಿ (30), ಕಾಸರಗೋಡು ಜಿಲ್ಲೆಯ ಆಮೂರು ಗ್ರಾಮದ ನಬಾಸ್ (37), ಒಳಮೊಗ್ರು ಗ್ರಾಮದ ಸಲ್ಮಾನ್ ಫಾರೀಸ್ (25), ಉರುವಾಲು ಗ್ರಾಮದ ಸಿರಾಜುದ್ದೀನ್ (34) ಹಾಗೂ ಪುತ್ತಿಲ ಗ್ರಾಮದ ಇರ್ಷಾದ್ (31) ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಪ್ಪಳಿಗೆ ನಿವಾಸಿ ಇಬ್ರಾಹಿಂ, ಸಂದೀಪ್ ಪುಂಡಲೀಕ ಶೋಳಂಬಿ, ಉರುವಾಲು ಗ್ರಾಮದ ಸಿರಾಜುದ್ದೀನ್ ಹಾಗೂ ಪುತ್ತಿಲದ ಇರ್ಷಾದ್ ಅವರನ್ನು ಆರಂಭದಲ್ಲಿ ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಉಳಿದ ಆರೋಪಿಗಳಾದ ಆಮೂರು ಗ್ರಾಮದ ನಬಾಸ್, ಒಳಮೊಗ್ರುವಿನ ಸಲ್ಮಾನ್ ಫಾರಿಸ್ ಹಾಗೂ ಚಂಗುಲ ಗ್ರಾಮದ ಶರೀಫ್ ಅವರನ್ನು ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಜುಲೈ 26ರಂದು ಪೊಲೀಸ್ ಕಸ್ಟಡಿಯಲ್ಲಿದ್ದ ನಾಲ್ವರು ಆರೋಪಿಗಳನ್ನೂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಇದರ ಮಧ್ಯೆ, ನ್ಯಾಯಾಲಯದ ಅನುಮತಿ ಪಡೆದು ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡವು, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ಶಕೀಲ್ ಹಾಗೂ ಸಂದೀಪ್ ಪುಂಡಲೀಕ ಶೋಳಂಬಿ ವಾಸವಾಗಿದ್ದ ಕುವೆಟ್ಟು ಗ್ರಾಮದ ಬಾಡಿಗೆ ಮನೆಯಲ್ಲಿ ಶೋಧ ಕಾರ್ಯ ನಡೆಸಿತು.ಶೋಧ ಕಾರ್ಯದ ವೇಳೆ ಸಂದೀಪ್ ಪುಂಡಲೀಲ ಶೋಳಂಬಿ ಬಳಸುತ್ತಿದ್ದ ಕೊಠಡಿಯಿಂದ ಪ್ರಿಂಟರ್, ರಾಸಾಯನಿಕ ದ್ರಾವಣವಿದ್ದ ಬಾಟಲಿಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 1

    CrimeNews PoliceInvestigation

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.