Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ವಿಧಾನಪರಿಷತ್ ಉಪ ಚುನಾವಣೆ- ಇಂದು ಮತ ಎಣಿಕೆ
    Uncategorized

    ಉಡುಪಿ: ವಿಧಾನಪರಿಷತ್ ಉಪ ಚುನಾವಣೆ- ಇಂದು ಮತ ಎಣಿಕೆ

    October 24, 2024
    Share

    ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್‌ಗೆ 33ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ರದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ರದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

    Post Views: 116

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.