Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸರ್ಕಾರಿ ಬಸ್‌ ಚಕ್ರದಡಿ ನಾಡ ಬಾಂಬ್‌ ಸ್ಫೋಟ: ತಪ್ಪಿದ ಘೋರ ದುರಂತ
    ಇತ್ತೀಚಿನ ಸುದ್ದಿ

    ಸರ್ಕಾರಿ ಬಸ್‌ ಚಕ್ರದಡಿ ನಾಡ ಬಾಂಬ್‌ ಸ್ಫೋಟ: ತಪ್ಪಿದ ಘೋರ ದುರಂತ

    December 2, 2025
    Share

    ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದ್ದು, ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಅಷ್ಟಕ್ಕೂ ಬಸ್‌ನಡಿ ಬಾಂಬ್‌ ಇಟ್ಟವರು ಯಾರು? ಇದರ ಹಿಂದಿನ ಉದ್ದೇಶವೇನು ಎಂಬ ಚರ್ಚೆ ಆರಂಭಗೊಂಡಿದೆ.

    ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಜೋರಾದ ಸ್ಫೋಟದ ಶಬ್ದದಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಇದರಿಂದ ಪಕ್ಕದಲ್ಲಿದ್ದ ಟಿಸಿಗೆ (ವಿದ್ಯುತ್ ಪರಿವರ್ತಕಕ್ಕೆ) ಬಸ್ ಡಿಕ್ಕಿ ಹೊಡೆದಿದೆ.

    ಸ್ಫೋಟಕ್ಕೂ 5 ನಿಮಿಷಗಳ ಮುನ್ನ ಹಿಂದಿನ ನಿಲ್ದಾಣದಲ್ಲಿ 45 ವಿದ್ಯಾರ್ಥಿಗಳು ಬಸ್‌ನಿಂದ ಇಳಿದಿದ್ದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನ ಟೈಯರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ.

    ಒಂದು ವೇಳೆ ಬಾಂಬ್ ಟೈಯರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗುವ ಸಾಧ್ಯತೆ ಇತ್ತು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Post Views: 135

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.