Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಚ್ಛೇದನಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಿದ ಜೋಡಿಗಳಿಗೆ ಮರು ಮದುವೆಯ ಭಾಗ್ಯ
    ಇತ್ತೀಚಿನ ಸುದ್ದಿ

    ವಿಚ್ಛೇದನಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಿದ ಜೋಡಿಗಳಿಗೆ ಮರು ಮದುವೆಯ ಭಾಗ್ಯ

    December 15, 2024
    Share

    ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ ಅಲೆದಾಡುತ್ತಿದ್ದಾರೆ. ಈ ರೀತಿ ಉಡುಪಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ಮೂರು ಜೋಡಿಯನ್ನು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಮತ್ತೆ ಒಂದು ಮಾಡಲಾಗಿದೆ. ಇದೊಂದು ಅಪರೂಪದ ಕ್ಷಣವಾಗಿದ್ದು, ನ್ಯಾಯಾದೀಶರುಗಳು ಈ ಜೋಡಿಗಳ ಮನ ಒಲಿಸಿ ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ.

    ಉಡುಪಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ , ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಅವರ ನೇತೃತ್ವದಲ್ಲಿ ಜೋಡಿಗಳು ಮತ್ತೆ ಒಂದಾಗಿದ್ದಾರೆ. ಒಂದು ಜೋಡಿ 2011 ರಲ್ಲಿ ಬೇರೆಯಾಗಿದ್ದರೆ, ಮತ್ತೊಂದು ಜೋಡಿ 2019 ರಲ್ಲಿ ಹಾಗೂ ಇನ್ನೊಂದು ಜೋಡಿ 2021 ರಲ್ಲಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಮೂರು ಜೋಡಿಗಳ ಮನವೊಲಿಸಿ ಜೀವನದ ಪಾಠ ಮಾಡುವ ಮೂಲಕ ನ್ಯಾಯಾಧೀಶರು ಮತ್ತೆ ಒಂದಾಗುವಂತೆ ಮನ ಒಲಿಸಿದ್ದಾರೆ. ಸುಖ ಜೀವನಕ್ಕೆ ಹೇಗೆ ಹೊಂದಿಕೊಂಡು ಬದುಕಬೇಕು , ಸಣ್ಣ ಪುಟ್ಟ ವಿಚಾರಗಳನ್ನು ಹೇಗೆ ತಮ್ಮಲ್ಲಿ ಬಗೆ ಹರಿಸಿಕೊಳ್ಳಬೇಕು ಎಂಬ ಸಲಹೆಯನ್ನು ಜೋಡಿಗಳಿಗೆ ನೀಡಲಾಗಿತ್ತು. ಸಲಹೆಯನ್ನು ಒಪ್ಪಿಕೊಂಡು ಮತ್ತೆ ಒಂದಾಗಲು ಒಪ್ಪಿದ ಜೋಡಿಗಳಿಗೆ ನ್ಯಾಯಾಲಯದಲ್ಲೇ ಮರು ಮದುವೆ ಕೂಡಾ ಮಾಡಿಸಲಾಯಿತು.

    Post Views: 254

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.