Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»Court Jobs: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ.. ಟೈಪಿಸ್ಟ್​, ಜವಾನ ಹುದ್ದೆಗಳ ಭರ್ತಿ
    ಇತ್ತೀಚಿನ ಸುದ್ದಿ

    Court Jobs: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ.. ಟೈಪಿಸ್ಟ್​, ಜವಾನ ಹುದ್ದೆಗಳ ಭರ್ತಿ

    October 28, 2023
    Share

    ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್​, ಸ್ಟೆನೋಗ್ರಾಫರ್​, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ..

    ಹುದ್ದೆ ವಿವರ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ.

    ಶೀಘ್ರ ಲಿಪಿಗಾರ ಹುದ್ದೆ- 10 ಬೆರಳಚ್ಚುಗಾರ ಹುದ್ದೆ 6 ಬೆರಳಚ್ಚು-ನಕಲುಗಾರ ಹುದ್ದೆ- 2 ಜವಾನ ಹುದ್ದೆಗಳು -36

    ವಿದ್ಯಾರ್ಹತೆ: ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್​ ಕರ್ಮಷಿಯಲ್​ ಪ್ರಾಕ್ಟೀಸ್​ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 35 ವರ್ಷ ಪೂರೈಸಿರಬೆಕು. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​, ಟೈಪಿಂಗ್​, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ನವೆಂಬರ್​ 6ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 5 ಆಗಿದೆ.

    ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು dk.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ. 

    Post Views: 262

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.