ಬೆಳ್ತಂಗಡಿ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯಲ್ಲಿ ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಇದರಲ್ಲಿ ಗೋ ಸಾಗಾಟ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.
ಇನ್ನೋವಾ ಕಾರಿನಲ್ಲಿ ಆರೋಪಿಗಳು ಗೋವುಗಳನ್ನು ಸಾಗಾಟ ಮಾಡುತ್ತಿದ್ದು, ಎರಡು ನಂಬರ್ ಪ್ಲೇಟ್‌ಗಳನ್ನು ಬಳಸಿ ಈ ಕೃತ್ಯ ನಡೆಸಲಾಗಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಸಂಚಾರ ಅಸ್ತವ್ಯಸ್ತವಾಗಿತ್ತು.
ಅಪಘಾತದಿಂದ ಕಾರಿನಲ್ಲಿದ್ದ ಹಸು ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ಅಕ್ರಮ ಗೇಸಾಗಾಟದ ಘಟನೆ ಬೆಳಕಿಗೆ ಬಂದಿದೆ.




