Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಬಾಲಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ: ಸ್ಥಳೀಯರಿಂದ ಆಕ್ರೋಶ
    ಇತ್ತೀಚಿನ ಸುದ್ದಿ

    ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಬಾಲಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ: ಸ್ಥಳೀಯರಿಂದ ಆಕ್ರೋಶ

    January 2, 2023
    Share

    ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ.

    ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಕೆಳಕ್ಕೆ ಬಿದ್ದ ಬಾಲಕನನ್ನು ಸ್ಥಳೀಯರೇ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ವೇಳೆ ಸ್ಥಳೀಯರು ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೇ, ಬಳಿಕ ಪಣಂಬೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯರು ಹೇಳುವಂತೆ ‘ಈ ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು ದೌರ್ಜನ್ಯ ಅಂತಾನೇ ಹೇಳಬಹುದು.

    ಆ ಬಾಲಕನಿಗೆ ಮೊದಲೇ ಕಿಡ್ನಿ ಸಮಸ್ಯೆ ಇದ್ದ ಕಾರಣ ಇದೀಗ ಪೊಲೀಸರ ಏಟು ಕೂಡಾ ದೇಹದ ಮೇಲೆ ದುಷ್ಪರಿಣಾಮ ಬೀರಿದೆ. ಇವತ್ತು ಪರೀಕ್ಷೆ ಬರೆಯಬೇಕಿದ್ದ ಬಾಲಕ ಹಾಸಿಗೆ ಹಿಡಿದಿದ್ದಾನೆ. ಪೊಲೀಸರ ಈ ವರ್ತನೆಗೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ. ಗಾಯಗೊಂಡ ಬಾಲಕನನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಪಡೆದುಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

    Post Views: 245

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.