Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಯುವಕನ ಹತ್ಯೆ ಆರೋಪದಲ್ಲಿ ಮೂವರು ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಯುವಕನ ಹತ್ಯೆ ಆರೋಪದಲ್ಲಿ ಮೂವರು ಬಂಧನ

    June 2, 2026
    Share

    ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ಅಸಹಜ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನ ನಿವಾಸಿ ಯತೀಶ್ ಗೌಡ (32) ಎಂಬವರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಕೊಲೆ ಪ್ರಕರಣದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ.ಇಂದು ಬೆಳಿಗ್ಗೆ ಪೆರ್ನೆ ನಿವಾಸಿ ಯತೀಶ್ ಎಂಬವರ ಮೃತದೇಹ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಬಳಿ ಇರುವ ಶ್ರೀದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಪತ್ತೆಯಾಗಿತ್ತು.ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಬೆಳ್ತಂಗಡಿ ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಹಲ್ಲೆಯಿಂದಾಗಿ ಯತೀಶ್‌ ಮೃತಪಟ್ಟಿರುವುದಾಗಿ ಅವರ ಸಹೋದರ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ, ಕಾರ್ಯ ಪ್ರವೃತ್ತರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ‌ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ, ಸೋಕೋ ತಂಡ ಹಾಗೂ ಇತರ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Post Views: 130

    dakshina kannada PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.