Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು- ಹಲವರು ಅಸ್ವಸ್ಥ
    ಇತ್ತೀಚಿನ ಸುದ್ದಿ

    ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು- ಹಲವರು ಅಸ್ವಸ್ಥ

    November 24, 2025
    Share

    ಕಾಸರಗೋಡು: ಜನಪ್ರಿಯ ಗಾಯಕ ಮತ್ತು ವ್ಲೋಗರ್ ಹನಾನ್ ಶಾ ಅವರ ಗಾನಮೇಳದ ವೇಳೆ ಉಂಟಾದ ಭಾರಿ ನೂಕುನುಗ್ಗಲಿನಲ್ಲಿ ಉಸಿರಾಟದ ತೊಂದರೆಯಿಂದ ಹಲವು ಮಂದಿ ಕುಸಿದುಬಿದ್ದ ಘಟನೆ ಕಾಸರಗೋಡಿನ ನುಳ್ಳಿಪ್ಪಾಡಿ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ.

    ಯುವಜನರ ಒಕ್ಕೂಟವಾದ ‘ಫ್ರೀ’ ಆಯೋಜಿಸಿದ್ದ ಈ ಗಾನಮೇಳದ ಸಮಾಪನಾ ದಿನದ ಮುಖ್ಯ ಅತಿಥಿಯಾಗಿ ಖ್ಯಾತ ಗಾಯಕ ಹನಾನ್ ಶಾ ಭಾಗವಹಿಸಿದ್ದರು. ಇವರನ್ನು ನೋಡಲು ಮತ್ತು ಹಾಡುಗಳನ್ನು ಕೇಳಲು ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ನೂರಾರು ಜನರು ನುಳ್ಳಿಪ್ಪಾಡಿ ಮೈದಾನದಲ್ಲಿ ಕಿಕ್ಕಿರಿದು ಸೇರಿದ್ದರು.

    ರಾತ್ರಿ ಸುಮಾರು 8:30ರ ಸುಮಾರಿಗೆ ಜನರ ಸಂಖ್ಯೆ ಮಿತಿಮೀರಿ ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ, ಸರಿಯಾದ ಗಾಳಿ ಮತ್ತು ಉಸಿರಾಟದ ತೊಂದರೆಯಿಂದಾಗಿ ಹಲವಾರು ಮಂದಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    ಘಟನೆಯ ಮಾಹಿತಿ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ, ಜನರನ್ನು ಸುರಕ್ಷಿತವಾಗಿ ಹೊರ ಕಳುಹಿಸಲು ಮತ್ತು ಜನಸಂದಣಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದರು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

    ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾದವರು, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆಂದು ತಿಳಿದು ಬಂದಿದೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.