Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ
    ಇತ್ತೀಚಿನ ಸುದ್ದಿ

    ಕರ್ನಾಟಕದಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ

    April 10, 2025
    Share

    ಬೆಂಗಳೂರು : ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ.

    ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಈ ತನಿಖಾ ಘಟಕ ಕಾರ್ಯಾಚರಣೆ ನಡೆಸಲಿದೆ. ಘಟಕದ ಡಿಐಜಿಯಾಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಐಜಿಪಿ, ಎಸ್ಪಿ ಸೇರಿದಂತೆ ಇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲು ಸರ್ಕಾರ ಉದ್ದೇಶಿಸಿದೆ.

    ಸೈಬರ್ ಕಮಾಂಡ್ ಹೊಣೆಗಾರಿಕೆಯನ್ನು ಪೊಲೀಸ್ ಮಹಾನಿರ್ದೇಶಕರ ಶ್ರೇಣಿಯ ಐಪಿಎಸ್ ಅಧಿಕಾರಿಗೆ ವಹಿಸಲಾಗುತ್ತದೆ. ಪ್ರಣಾವ್ ಮೊಹಾಂತಿ ಅವರಿಗೆ ಹೊಣೆಗಾರಿಕೆಯನ್ನು ನೀಡಲಾಗುತ್ತಿದ್ದು, ಈ ವಿಚಾರವಾಗಿ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

    ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್‌ವೇರ್, ಹಿಂಬಾಲಿಸುವುದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಆನ್‌ಲೈನ್ ಅಪರಾಧಗಳು, ಸೆಕ್ಸ್‌ಟಾರ್ಷನ್, ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ವಂಚನೆಗಳು, ಡೀಪ್‌ಫೇಕ್‌ಗಳು, ಐಡೆಂಟಿಟಿ ತೆಫ್ಟ್, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ತಪ್ಪು ಮಾಹಿತಿ ಇತ್ಯಾದಿಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ಕಾರ್ಯಾಚರಣೆ ನಡೆಸಲಿದೆ. ಈ ಮೊದಲು ಸೈಬರ್ ಕ್ರೈಂ ಮತ್ತು ನಾಕ್ರೊಟಿಕ್ಸ್ ವಿಭಾಗವು ಸೈಬರ್ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿತ್ತು.

    Post Views: 331

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.