Facebook Twitter Instagram
    Wednesday, September 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ

    September 2, 2026
    Share

    ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ಮನೆಯನ್ನೂ ನಿರ್ಮಿಸದೆ, ಹಣವನ್ನೂ ವಾಪಸ್ ಕೊಡದೆ, ಹಣದ ಕುರಿತು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿ ಸಿಪ್ರಿಯಾನ್ ಡಿಸೋಜ ಎಂದು ತಿಳಿದು ಬಂದಿದೆ.

    ಜಯಂತ್ ನಾಯ್ಕ ಮನೋಜ್, ವಾಸುದೇವ ಎಂಬವರಿಗೆ 1250 ಚದರ ಅಡಿಯ ಮನೆ ಕಟ್ಟಿಸಿ ಕೊಡುವುದಾಗಿ ತಿಳಿಸಿದ ಸಿಪ್ರಿಯಾನ್ ಡಿಸೋಜ ಜಾಗ ಮತ್ತು ಮನೆಗೆ 30 ಲಕ್ಷ ರೂ. ನಿಗದಿಪಡಿಸಿದ್ದ. ಹಾಗೆಯೇ 2017ರ ಜೂ.28ರಂದು ಕರಾರು ಪತ್ರ ಮಾಡಿಸಿಕೊಂಡು ಒಂದು ವರ್ಷದೊಳಗೆ ಮನೆ ನಿರ್ಮಿಸಿಕೊಡುವುದಾಗಿ ಮೂವರಿಗೆ ಭರವಸೆ ನೀಡಿ ಮುಂಗಡ ಪಡೆದಿದ್ದ. ಆದರೆ ಒಂದು ವರ್ಷದೊಳಗೆ ಮನೆ ನಿರ್ಮಿಸದ ಕಾರಣ ಮೂವರು ವಿಚಾರಿಸಿದಾಗ ಮುಂಗಡ ವಾಪಸ್ ಕೊಡುವುದಾಗಿ ಹೇಳಿದ್ದರೂ ಹಣ ವಾಪಸ್ ಕೊಟ್ಟಿರಲಿಲ್ಲ ಎಂದು ದೂರಲಾಗಿತ್ತು.

    2021ರ ಜ.20ರಂದು ಪುತ್ತಿಗೆ ಗ್ರಾಮದ ಮಿತ್ತಬೈಲಿನ ಸಿಪ್ರಿಯಾನ್ ಡಿಸೋಜನ ಮನೆಗೆ ಮೂವರು ಹೋಗಿ ಕೇಳಿದಾಗ ಕೋಪಗೊಂಡ ಸಿಪ್ರಿಯಾನ್ ಡಿಸೋಜ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡಿ ಬೈದಿದ್ದ.

    ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಐಪಿಸಿ ಮತ್ತು ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಎಸ್‌. ಮಹೇಶ್ ಕುಮಾರ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

    ಈ ಪ್ರಕರಣದಲ್ಲಿ 19 ಸಾಕ್ಷಿದಾರರ ಪೈಕಿ 13 ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿದ್ದು, ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶ ಜಗದೀಶ ವಿ.ಎನ್. 15,60,000 ರೂ. ದಂಡ ಪಾವತಿಸಬೇಕು. ಇಲ್ಲದಿದ್ದರೆ 3 ವರ್ಷಗಳ ಸಾದಾ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

    Post Views: 1

    Related Posts

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

    September 2, 2026

    ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

    September 1, 2026

    ಮಂಗಳೂರು: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

    September 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ

    September 2, 2026

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

    September 2, 2026

    ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

    September 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.