ಬೆಂಗಳೂರು : ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ.
ಈ ಮೊದಲು ಹೆಚ್ಎಸ್ಆರ್ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದವರೆಗೆ ಹೆಚ್ಎಸ್ಆರ್ಪಿ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಆದರೆ ಸದ್ಯ 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿದೆ. ಹೀಗಾಗಿ ಸತತ 5ನೇ ಬಾರಿಗೆ ಹೆಚ್ಎಸ್ಆರ್ಪಿ ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.