Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲೋಕಸಭಾ ಚುನಾವಣೆ: ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿ
    ಇತ್ತೀಚಿನ ಸುದ್ದಿ

    ಲೋಕಸಭಾ ಚುನಾವಣೆ: ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

    March 29, 2024
    Share

    ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮಾ.28ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

    ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಮಾ.28ರಿಂದ ಏ.8ರವರೆಗೆ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಏ. 4ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏ. 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಏ. 6ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.ಇನ್ನು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭ ನಿಷೇಧಿತ 100 ಮೀ.ಪರಿಧಿಯಲ್ಲಿ ಅಭ್ಯರ್ಥಿಯ ವಾಹನ ಸೇರಿ, ಗರಿಷ್ಟ ಮೂರು ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಯನ್ನು ಒಳಗೊಂಡಂತೆ ಗರಿಷ್ಠ 5 ಮಂದಿಗೆ ಮಾತ್ರ ಕಚೇರಿ ಆವರಣ ಪ್ರವೇಶಿಸಲು ಅನುಮತಿ ನೀಡಲಾಗಿದ್ದು, 5ಕ್ಕಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳೊಂದಿಗೆ ಓಡಾಡುವುದನ್ನು ನಿಷೇಧಿಸಲಾಗಿದೆ.ಇನ್ನು ನಿಷೇಧಿತ ಪ್ರದೇಶದಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆಯವರು ಮತ್ತು ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜೊತೆಗೆ ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ, ಶಿಸ್ತು ಪಾಲನೆಗೆ ಭಂಗ ತರುವಂತೆ ವರ್ತಿಸುವುದು, ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡುವುದು ಅಥವಾ ನಷ್ಟಗೊಳಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.