Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ದ.ಕ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್
    ಇತ್ತೀಚಿನ ಸುದ್ದಿ

    ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ದ.ಕ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್

    October 25, 2025
    Share

    ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್‌ ಕುಮಾ‌ರ್ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ.ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು ವಶಕ್ಕೆ ಪಡೆದು, ಓರ್ವ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಪೋಸ್ಟ್‌ಗಳನ್ನು ಹರಿಯಬಿಡುವುದಕ್ಕೆ ಸಂಬಂಧಿಸಿ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

    ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೈಯಲ್ಲಿ ಕತ್ತಿ ಹಿಡಿದುಕೊಂಡು ಲಾರಿಯ ಹಗ್ಗ ಮತ್ತು ಟರ್ಪಾಲ್ ಕೊಯ್ಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಒಳಗೊಂಡಂತೆ ಪುತ್ತೂರಿನಲ್ಲಿ ನಡೆದ ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿರುವ ಎಸ್‌ಪಿ ಈ ಘಟನೆಯ ನಂತರ ಪೊಲೀಸರ ಜೊತೆಗೆ ಸ್ಥಳೀಯರು ಹಾಗೂ ಹಾಗೂ ಅರುಣ್ ಕುಮಾರ್ ಪುತ್ತಿಲ ಜಾನುವಾರುಗಳನ್ನು ವಾಹನದಿಂದ ಇಳಿಸಿದ್ದಾರೆ.51ಜಾನುವಾರುಗಳ ಇನ್ನಷ್ಟು ಸಾವನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸ್ ನಿರೀಕ್ಷಕರು ಅನುಮತಿ ಕೊಟ್ಟಿದ್ದರು. ಈ ಪ್ರಕರಣದಲ್ಲಿ ಯಾವುದೇ ಧಾರ್ಮಿಕ ಸಂಘಟನೆ ಅಥವಾ ವ್ಯಕ್ತಿಯೊಂದಿಗೆ ಪೊಲೀಸರ ಯಾವುದೇ ಸಹಭಾಗಿತ್ವ ಅಥವಾ ದುರುದ್ದೇಶ ಕಂಡುಬಂದಿಲ್ಲ. ಆದರೆ ದೂರವಾಣಿಯಲ್ಲಿ ಮಾತನಾಡುವಾಗ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ನಂತರ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಾಯ ತೆಗೆದುಕೊಂಡಿರುವುದು ಇನ್‌ಸ್ಪೆಕ್ಟ‌ರ್ ಅವರ ತಪ್ಪಾಗಿರುತ್ತದೆ. ಆದ್ದರಿಂದ ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೊ ನೀಡಲಾಗುತ್ತದೆ. ಮುಂದಿನ ದಿವಸಗಳಲ್ಲಿ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ಮಾಡಲು ಅವಕಾಶ ಮಾಡಲು ಅವಕಾಶ ನೀಡದೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಸ್‌ಪಿ ಹೇಳಿದ್ದಾರೆ.ವಾಹನವನ್ನು ಪೋಲಿಸರೇ ಹಿಂಬಾಲಿಸಿ ಬಳಿಕ ನಿಲ್ಲಿಸಿದ್ದಾರೆ. ವಾಹನ ನಿಲ್ಲಿಸುವಲ್ಲಿ ಯಾವುದೇ ಸಂಸ್ಥೆಯ ಪಾತ್ರ ಇರುವುದಿಲ್ಲ. ಪ್ರಕರಣವನ್ನು ನ್ಯಾಯಸಮ್ಮತ ತನಿಖೆಗಾಗಿ ಮರುದಿನವೇ ಪುತ್ತೂರು ಉಪವಿಭಾಗದ ವ್ಯಾಪ್ತಿಯಿಂದ ವರ್ಗಾಯಿಸಲಾಯಿತು.

    ಈ ಘಟನೆಯ ನಂತರ ಪಿಎಸೈ ಬೆಳ್ಳಾರೆ ಹಾಗೂ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದರು. ಉಳಿದ ಉಳಿದ ಅಧಿಕಾರಿಗಳು ತನಿಖಾ ಕ್ರಮದಲ್ಲಿ ತೊಡಗಿಸಿಕೊಂಡಿದ್ದರು ಹಾಗೂ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸುತ್ತಿದ್ದರು. ಅರುಣ್‌ ಕುಮಾ‌ರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿದ್ದಾರೆ. ನಂತರ ಕಾನ್‌ಸ್ಟೆಬಲ್ ಅವರು ಇನ್‌ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾ‌ರ್ ಪುತ್ತಿಲ ಕಾನ್‌ಸ್ಟೆಬಲ್ ರಲ್ಲಿ ಮೊಬೈಲ್ ಕೇಳಿ ಪಡೆದುಕೊಂಡು ಇನ್‌ಸ್ಪೆಕ್ಟರ್ ಜೊತೆ ಮಾತನ ಮಾತನಾಡಿದ್ದಾರೆ. ಅದಕ್ಕೆ ಇನ್‌ಸ್ಪೆಕ್ಟರ್ ಅನುಮತಿ ಕೊಟ್ಟಿರುತ್ತಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯು ಬೇರೆಯದೇ ರೀತಿಯಲ್ಲಿ ಪ್ರಚಾರಗೊಂಡಿರುತ್ತದೆ ಎಂದು ಎಸ್‌ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 167

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.