ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ.
ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.