Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿದ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿದ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ

    April 15, 2026
    Share

    ಕಾರ್ಕಳ: ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿದ ವಿಚಾರಕ್ಕೆ ಮೂವರು ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

    ವಿಜಯ ಕುಮಾರ್ (40) ಅವರು ಏಪ್ರಿಲ್ 12ರಂದು ದುರ್ಗಾನಗರದಲ್ಲಿ ನಡೆಯುತ್ತಿದ್ದ ಸೈಕಲ್ ಸರ್ಕಸ್‌ಗೆ ತೆರಳಿ ಡ್ಯಾನ್ಸ್ ಮಾಡಿ ಮನೆಗೆ ಹಿಂದಿರುಗುವಾಗ, ದುರ್ಗಾನಗರದ ಆಶ್ಲೇಶ್ ಹೋಟೆಲ್ ಬಳಿ ಅವರ ಸ್ನೇಹಿತರು ಗುರುಪ್ರಸಾದ್, ಶಿವ ಮತ್ತು ದಯಾನಂದ ಅಡ್ಡಗಟ್ಟಿದ್ದಾರೆ.

    ಈ ವೇಳೆ “ನೀನು ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿ ನಮ್ಮ ಊರಿನ ಮರ್ಯಾದೆ ತೆಗೆದುಕೊಳ್ಳುತ್ತಿದ್ದೀಯ” ಎಂದು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಗುರುಪ್ರಸಾದ್  ಮುಖ ಮತ್ತು ಕೆನ್ನೆಗೆ ಹೊಡೆದು ತಳ್ಳಿ ನೆಲಕ್ಕೆ ಬಿದ್ದು, ಮೂವರು ಸೇರಿಕೊಂಡು ಕಾಲಿನಿಂದ ಹಲ್ಲೆ ನಡೆಸಿದ್ದಾರೆ.

    ಹಲ್ಲೆ ವೇಳೆ ತಲೆಯ ಹಿಂಭಾಗ ಕಾಂಕ್ರೀಟ್‌ಗೆ ತಾಗಿ ರಕ್ತಗಾಯವಾಗಿದ್ದು, ವಿಜಯ ಕುಮಾರ್ ಬೊಬ್ಬೆ ಹಾಕುತ್ತಿದ್ದಂತೆ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ವಿಜಯ ಎಂಬವರು ಗಾಯಾಳುವಿಗೆ ಸಹಾಯ ಮಾಡಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಹಾಗೂ ನಂತರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 129

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.