Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಿಢೀರ್‌ ವರ್ಗಾವಣೆ
    ಇತ್ತೀಚಿನ ಸುದ್ದಿ

    ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಿಢೀರ್‌ ವರ್ಗಾವಣೆ

    February 15, 2024
    Share

    ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.

    ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್‌. ಲೋಬೊ ಕೂಡ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
    ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಕ ಮಾಡಲಾಗಿದೆ.

    Post Views: 287

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.