Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ವ್ಯಕ್ತಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ!
    ಕರಾವಳಿ ಸುದ್ದಿ

    ಮಂಗಳೂರು: ವ್ಯಕ್ತಿಯ ಮೃತದೇಹ ರೈಲಿನ ಶೌಚಾಲಯದಲ್ಲೇ 24 ಗಂಟೆ ಬಾಕಿ!

    April 25, 2023
    Share

    ಮಂಗಳೂರು: ಮುಂಬೈ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರೈಲಿನ ಶೌಚಾಲಯದಲ್ಲೇ ಮೃತಪಟ್ಟಿದ್ದು, ಈ ವಿಷಯ ರೈಲಿನ ಸಿಬ್ಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋಗಿರುವ ಘಟನೆ ನಡೆದಿದೆ.

    ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ಈ ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿವರೆಗೂ ಹುಡುಕಾಡಿದ್ದಾರೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ  ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿ ರುವುದು ನೋವು ತಂದಿದೆ.ಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್‌ ಮಾಡಿ ಕಳಿಸಿದೆ.

    ಆದರೆ ಪಾರ್ಸೆಲ್‌ ಇಲ್ಲಿಗೆ ಬರುವಾಗ ದೇಹ ಪೂರ್ಣ ಕೊಳೆತು ದುರ್ವಾಸನೆ ಬೀರುತ್ತಿತ್ತು.ಮೋಹನ್‌ ಬಂಗೇರ ಹಲವು ವರ್ಷ ಗಳಿಂದ ಮುಂಬಯಿನಲ್ಲಿ ಮಿಲ್ಕ್ ಪಾರ್ಲರ್‌ ನಡೆಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರು ಕಿನ್ನಿಗೋಳಿಯ ಮನೆಯಲ್ಲಿದ್ದಾರೆ.ಇನ್ನು ಮೋಹನ್‌ ಬಂಗೇರ ಅವರು ಮುಂಬೈಯಿಂದ ಎ. 18ರ ಮುಂಬಯಿ ಸಿಎಸ್‌ಟಿ ಮಂಗಳೂರು ಜಂಕ್ಷನ್‌ ರೈಲಿನ ಬಿ-3 ಕೋಚ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಅವರನ್ನು ಕರೆದೊಯ್ಯಲು ಸೋದರ ಹಾಗೂ ಇತರರು ಸುರತ್ಕಲ್‌ನಲ್ಲಿ ಕಾಯುತ್ತಿದ್ದರು. ಆಗ ಮೋಹನ್‌ ಬಂಗೇರ ಅವರು ರೈಲಿನಲ್ಲಿ ನಾಪತ್ತೆಯಾದ ವಿಚಾರ ಅವರಿಗೆ ರೈಲಿನ ಟಿಟಿಇ ಮೂಲಕ ಫೋನ್‌ನಲ್ಲಿ ಲಭಿಸಿತು. ಅವರ ಬ್ಯಾಗ್‌, ಪರ್ಸ್‌ ಮತ್ತು ಮೊಬೈಲ್‌ ಕುಳಿತಿದ್ದ ಜಾಗದಲ್ಲೇ ಇತ್ತು.ಟಿಟಿಇಯಲ್ಲಿ ಈ ಕುರಿತು ಮಾತನಾಡಿದಾಗ, ಅವರು ಮೋಹನ್‌ ಬಂಗೇರರು ಕಂಕಾವಲಿ ಅಥವಾ ಮಡಗಾಂವ್‌ನಲ್ಲಿ ಇಳಿದು ಹೋದಂತಿದೆ, ಅಲ್ಲಿಯ ಸಿಸಿಟಿವಿ ಫೂಟೇಜ್‌ ನೋಡಿದರೆ ಗೊತ್ತಾಗಬಹುದು ಎಂದಿದ್ದರು. ಬಳಿಕ ಮೋಹನ್‌ ಕುಟುಂಬದವರು ಮಂಗಳೂರು ಜಂಕ್ಷನ್‌ಗೆ ತೆರಳಿ ಅಲ್ಲಿನ ಅಧಿಕಾರಿಗಳ ಸಲಹೆಯಂತೆ ರೈಲ್ವೇ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.

    ಇನ್ನು ಮುಂಬೈಯಲ್ಲಿರುವ ಸಂಬಂಧಿಕರೂ ಹಲವು ಸ್ಟೇಷನ್‌ಗಳಲ್ಲಿ ಸಿಸಿಟವಿ ದೃಶ್ಯಾವಳಿ ಪರಿಶೀಲನೆ ನಡೆಸಿದರೂ ಎಲ್ಲೂ ಪತ್ತೆಯಾಗಲಿಲ್ಲ. ಮರುದಿನ ಮೋಹನ್‌ ಅವರ ಅಣ್ಣ ರಾಮ ಬಂಗೇರ ಅವರಿಗೆ ಮುಂಬಯಿ ಸಿಎಸ್‌ಟಿ ಸ್ಟೇಷನ್‌ನಿಂದ ಟಿಟಿಇ ಕರೆ ಮಾಡಿದ್ದು ಮೃತದೇಹ ರೈಲಿನ ಟಾಯ್ಲೆಟ್‌ನಲ್ಲಿ ಪತ್ತೆಯಾಗಿರುವುದನ್ನು ತಿಳಿಸಿದ್ದ.ಈ ಕುರಿತು ಮಾತನಾಡಿರುವ ಮೋಹನ್‌ ಬಂಗೇರ ಅವರ ಸಹೋದರ ರಾಮಬಂಗೇರ, ತಮ್ಮನ ಮೃತದೇಹ ಮಂಗಳೂರಿಗೇ ರೈಲಿನ ಶೌಚಾಲಯದಲ್ಲೇ ಬಂದಿತ್ತು.

    ಆದರೆ ಸಿಬಂದಿ ಸರಿಯಾಗಿ ಹುಡುಕಾಡದೆ ನಿರ್ಲಕ್ಷ್ಯ ತೋರಿದ್ದರು. ಒಂದು ವೇಳೆ ಅವರು ಜೀವಂತವಿದ್ದ ಸಣ್ಣ ಅವಕಾಶವಿದ್ದರೂ ಇಲ್ಲಿ ಬದುಕಿಸಬಹುದಿತ್ತು, ಆದರೆ ಟಾಯ್ಲೆಟ್‌ ತಪಾಸಣೆ ಮಾಡದೇ ಹೋದ ಕಾರಣ ಮೃತಶರೀರ ಹಾಗೇ ಅದೇ ರೈಲಿನಲ್ಲಿ ಮುಂಬಯಿಗೆ ಮರಳಿದೆ ಎಂದು ತಿಳಿಸಿದ್ದಾರೆ.

    Post Views: 259

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.