Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ತ್ರಿಶೂರ್‌ನಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ತ್ರಿಶೂರ್‌ನಲ್ಲಿ ಪತ್ತೆ

    September 11, 2024
    Share

    ಮಂಗಳೂರು:ಹತ್ತು ದಿನಗಳ ಹಿಂದೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕಿಯೂರು ಅಳಿವೆಬಾಗಿಲಿನಲ್ಲಿ ಸಮುದ್ರ ಪಾಲಾಗಿದ್ದ ಚೆಮ್ನಾಡ್ ನಿವಾಸಿಯ ಮೃತದೇಹ ತ್ರಿಶೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಚೆಮ್ನಾಡ್ ಕಲ್ಲುವಳಪ್ಪುವಿನ ಮುಹಮ್ಮದ್ ರಿಯಾಝ್(37) ಮೃತಪಟ್ಟವರು. ಆ.31ರಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿತ್ತು. ಕಿಯೂರು ಅಳಿವೆಬಾಗಿಲಿನಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ರಿಯಾಝ್ ನಾಪತ್ತೆಯಾಗಿದ್ದರು. ಬೆಳಗ್ಗೆ 9 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಮಧ್ಯೆ ಕಿಯೂರು ಅಳಿವೆಬಾಗಿಲಿನಲ್ಲಿ ರಿಯಾಝ್ ನ ಸ್ಕೂಟರ್ ಹಾಗೂ ಗಾಳ ಹಾಕುವ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಕುಟುಂಬಸ್ಥರು ಮೇಲ್ಪರಂಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು, ಅಗ್ನಿ ಪೊಲೀಸ್, ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರರು ರಿಯಾಝ್ ಅವರಿಗಾಗಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆಯವರನ್ನು ಕರೆಸಿ ಗಂಟೆಗಳ ಕಾಲ ಶೋಧ ನಡೆಸಿದರೂ ಪ್ರಯೋಜವಾಗಲಿಲ್ಲ. ಬಳಿಕ ಎರಡು ದಿನಗಳ ಕಾಲ ನೌಕಾ ಪಡೆ ಸಿಬ್ಬಂದಿ ಹುಡುಕಾಟ ನಡೆಸಿದರೂ ವಿಫಲಗೊಂಡಿತ್ತು. ಈ ನಡುವೆ ಸೋಮವಾರ ಮಧ್ಯಾಹ್ನ ತ್ರಿಶೂರು ಅಝಿಕ್ಕೋಡ್ ಕಡಲ ಕಿನಾರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಪ್ಯಾಂಟ್ ಕಿಸೆಯಿಂದ ಲಭಿಸಿದ ಮೊಬೈಲ್‌ ನಲ್ಲಿದ್ದ ಸಿಮ್ ಹಾಗೂ ಧರಿಸಿದ್ದ ಜಾಕೆಟ್ ನಿಂದ ರಿಯಾಝ್ ನ ಮೃತದೇಹ ಎಂದು ಗುರುತಿಸಲಾಗಿ ಮೃತದೇಹವನ್ನು ಕೊಡಂಗಲ್ಲೂರು ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಚೆಮ್ನಾಡ್ ಗೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Post Views: 163

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.