Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬ್ರಹ್ಮಾವರ: ಜಗಳ ತಾರಕಕ್ಕೇರಿ ಪತ್ನಿಗೆ ಹೊಡೆದ ಪತಿ; ಮೃತ್ಯು
    Uncategorized

    ಬ್ರಹ್ಮಾವರ: ಜಗಳ ತಾರಕಕ್ಕೇರಿ ಪತ್ನಿಗೆ ಹೊಡೆದ ಪತಿ; ಮೃತ್ಯು

    August 23, 2024
    Share

    ಬ್ರಹ್ಮಾವರ: ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಈ ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

    ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ.9 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಳಿಯ ಮನೆಯಲ್ಲಿ ಬಾಡಿಗೆಯಲ್ಲಿ ವಾಸ ಮಾಡಿಕೊಂಡಿದ್ದರು. ಸ್ಥಳೀಯರು ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಇದರಿಂದಲೇ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.ಜಯಶ್ರೀ ಮೃತ ದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 193

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.