Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೀಕರ ಅಪಘಾತದಲ್ಲಿ ASI ದುರ್ಮರಣ,  ಪಿಎಸ್‌ಐ ಅಮಾನತು..!!
    ಇತ್ತೀಚಿನ ಸುದ್ದಿ

    ಭೀಕರ ಅಪಘಾತದಲ್ಲಿ ASI ದುರ್ಮರಣ,  ಪಿಎಸ್‌ಐ ಅಮಾನತು..!!

    March 18, 2024
    Share

    ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ.

    ಘಟನೆ ಬೆನ್ನಲ್ಲೇ ದೊಡವಾಡ ಠಾಣೆ ಪಿಎಸ್ಐ‌‌ ನಂದೀಶರನ್ನು ಅಮಾನತು ಮಾಡಿ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದೇ ಎಎಸ್ಐ ಸಾವಿಗೆ ಕಾರಣ ಎಂಬುದು ಸಾಬೀತಾಗಿದೆ. ವಿಜಯಕಾಂತ ಮಿಕಲಿ ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗದಿಂದ ಬೈಕ್ ಚಲಾಯಿಸುವಾಗ ಹಂಪ್ ಜಿಗಿಸಿ ರಸ್ತೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೆಲ ತಿಂಗಳ ಹಿಂದೆಯೇ ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿದ್ದಾರೆ. ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಕಾರಣಕ್ಕೆ ‌ದೊಡವಾಡ ಠಾಣೆ ‌ಪಿಎಸ್ಐ ನಂದೀಶ ಅಮಾನತು ಮಾಡಿ ಬೆಳಗಾವಿ ‌ಎಸ್‌ಪಿ ಡಾ.‌ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. .

    Post Views: 262

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.