Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!
    ಇತ್ತೀಚಿನ ಸುದ್ದಿ

    ಉಡುಪಿ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

    November 13, 2024
    Share

    ಉಡುಪಿ: ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್‌ ಕುಮಾರ್‌ (54) ಅವರ ಶವವು ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಇರಂದಾಡಿಯ ಹಾಡಿಯಲ್ಲಿ ಪತ್ತೆಯಾಗಿದೆ.

    ಪ್ರಾಣಿಗಳು ಎಳೆದಾಡಿದಂತೆ ಛಿದ್ರವಾಗಿದ್ದ ದೇಹ, ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ.ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಪಡುಬಿದ್ರಿ ಠಾಣೆಗೆ ನ. 10ರ ರಾತ್ರಿ ದೂರು ನೀಡಿದ್ದರು. ಸುನಿಲ್‌ ಮನೆಯವರು ಶವದ ಮೈಮೇಲಿದ್ದ ಬಟ್ಟೆಗಳ ಆಧಾರದಲ್ಲಿ ಅವರ ಗುರುತು ಪತ್ತೆಹಚ್ಚಿದ್ದಾರೆ.

    ರಿಕ್ಷಾ ಚಾಲಕರಾಗಿದ್ದ ಸುನಿಲ್‌ ಬಳಿಕ ಪೀಠೊಪಕರಣಗಳ ಮಳಿಗೆಯಲ್ಲಿಯೂ ದುಡಿಯುತ್ತಿದ್ದರು. ವಿಪರೀತ ಮದ್ಯಪಾನದ ಚಟವಿದ್ದು ಸರಿಯಾಗಿ ಮನೆಗೂ ಬರುತ್ತಿರಲಿಲ್ಲ ಎನ್ನಲಾಗಿದೆ. ಮಾನಸಿಕ ಕಾಯಿಲೆಗೂ ಚಿಕಿತ್ಸೆ ನೀಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ. ಅವರು ಅಕ್ಟೋಬರ್‌ 23ರಂದು ಮನೆ ಬಿಟ್ಟಿದ್ದರು. ಕೆಲವು ಸಲ ಎರಡು-ಮೂರು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಕಾರಣ ನ. 1ರಂದು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

    Post Views: 170

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.