Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು
    ಇತ್ತೀಚಿನ ಸುದ್ದಿ

    ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು

    January 24, 2026
    Share

    ಉಡುಪಿ : ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಯನ್ನು ವಂಚಿಸಲು ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್‌ದೇವ್ ಎಸ್. ಗೋಡೆಮನೆ ಅವರಿಗೆ ಜ.19ರಂದು ವಾಟ್ಸಾಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬನು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಚೆಲುವರಾಜ್ ಎಂದು ಹೇಳಿಕೊಂಡು ಕರೆ ಮಾಡಿದ್ದನು.

    ನಿಮ್ಮ ವಿರುದ್ಧ ಇ-ಮೇಲ್ ಮೂಲಕ ದೂರು ಬಂದಿದ್ದು, ಈ ದೂರನ್ನು ಬಗೆಹರಿಸಿಕೊಳ್ಳದಿದ್ದರೆ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಹಾಗೂ ಇಲಾಖಾ ವಿಚಾರಣೆ ನಡೆಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದನು. ಬಳಿಕ ಮತ್ತೊಬ್ಬ ವ್ಯಕ್ತಿ ಫೋನ್ ಮೂಲಕ ತಾನು ಹಿರಿಯ ಅಧಿಕಾರಿ ಎಂದು ಹೇಳಿಕೊಂಡು, ಈಗಾಗಲೇ ತಿಳಿಸಿದಂತೆ ನಡೆದುಕೊಳ್ಳದಿದ್ದರೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದನು.

    ಈ ಬಗ್ಗೆ ಅನುಮಾನಗೊಂಡ ಕಪಿಲ್‌ದೇವ್ ಉಡುಪಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಆ ಹೆಸರಿನ ಯಾವುದೇ ಅಧಿಕಾರಿಗಳು ಅಲ್ಲಿಲ್ಲ ಮತ್ತು ಬಂದ ಕರೆಗಳು ಲೋಕಾಯುಕ್ತ ಕಚೇರಿಯಿಂದಲ್ಲ ಎಂದು ತಿಳಿಸಿದರು.

    ಆದ್ದರಿಂದ ಅಪರಿಚಿತರು ವಂಚನೆ ಮಾಡಲು ಯತ್ನಿಸಿರುವುದು ದೃಢಪಟ್ಟಿದ್ದು, ಈ ಕುರಿತು ಕಪಿಲ್‌ದೇವ್ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Post Views: 121

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.