ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರೆಸಿ, ಬ್ರಿಜ್ ಭೂಷಣ್ರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು, ಮಂಪರು ಪರೀಕ್ಷೆಗೆ ಒಳಪಡಿಸಬೇಕು, ಎಂದು ಕುಸ್ತಿಪಟ್ಟುಗಳು ಪ್ರತಿಭಟನೆ ನಡೆಸುತ್ತಿರುವುದರಿಂದ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ತಿಂಗಳುಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ದೆಹಲಿ ಸುತ್ತಲಿನ ರಾಜ್ಯಗಳ ರೈತರು, ವಿವಿಧ ಕ್ಷೇತ್ರದ ಮುಖಂಡರು ಸಾಥ್ ಕೊಟ್ಟಿದ್ದಾರೆ. ಇನ್ನೂ ನೂತನ ಸಂಸತ್ ಭವನದ ಉದ್ಘಾಟನೆಯ ದಿನದಂದು ಪ್ರತಿಭಟನಾಕಾರರೆಲ್ಲ ಸೇರಿ ಮಹಿಳಾ ಸಮ್ಮಾನ್ ಮಹಾಪಂಚಾಯತ್ ಹಮ್ಮಿಕೊಂಡಿದ್ದರು. ಅದರ ಭಾಗವಾಗಿ, ರಾಷ್ಟ್ರಧ್ವಜವನ್ನು ಹಿಡಿದು ಹೊಸ ಸಂಸತ್ ಭವನದತ್ತ ಮೆರವಣಿಗೆ ಹೊರಟಿದ್ದರು. ಜಂತರ್ಮಂತರ್ ಸುತ್ತ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಹಾರುವುದನ್ನು ಕಂಡ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೂ ಈ ವಿಚಾರವಾಗಿ ಕ್ರೀಡಾಪಟ್ಟುಗಳ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲು 7 ದಿನಗಳು ದೆಹಲಿ ಪೊಲೀಸರಿಗೆ ಬೇಕಾಯಿತು. ಆದ್ರೆ ನಮ್ಮ ವಿರುದ್ಧ ಕೇಸ್ ದಾಖಲಿಸಲು ಭಾರೀ 7 ಗಂಟೆಯೂ ಬೇಕಾಗಿಲ್ಲ ಎಂದು ಹೇಳಿದರು.ಈ ಮೂಲಕ ಟ್ವೀಟ್ ಮಾಡಿರುವ ಸಾಕ್ಷಿ ಮಲಿಕ್ ಈ ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ? ತನ್ನ ದೇಶದ ಕ್ರೀಡಾಪಟುಗಳನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದನ್ನ ಕ್ರೀಡಾ ಜಗತ್ತೇ ನೋಡುತ್ತಿದೆ ಎಂದು ಕಿಡಿ ಕಾರಿದ್ದಾರೆ.ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಂಗೀತಾ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಹಲವರ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.