Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಸರಪಳಿಗೆ ಕೈಜೋಡಣೆ
    Uncategorized

    ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಸರಪಳಿಗೆ ಕೈಜೋಡಣೆ

    September 15, 2024
    Share

    ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಾನವ ಸರಪಳಿ ನಿರ್ಮಾಣವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್ ಗೇಟ್‌ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಪಿಟಿ ಸರ್ಕ್ಯೂಟ್ ಹೌಸ್ ಜಂಕ್ಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗ್ಗೆ 9.30ಕ್ಕೆ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಲಾವಿದ್ಯಾರ್ಥಿಗಳನ್ನು ಒಳಗೊಂಡ ಬೃಹತ್ ಮಾನವ ಸರಪಳಿ ರಚಿಸಲಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿದರು. ಆ ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸಂವಿಧಾನ ಪ್ರಸ್ತಾವನೆಯನ್ನು ಓದಿದರು. ಅದನ್ನು ಎಲ್ಲರೂ ಪುನರುಚ್ಚರಿಸಿದರು. ಬೆಳಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿ ಎಲ್ಲರೂ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಿದರು. ಈ ವೇಳೆ ವಿವಿಧ ಕಲಾ ಪ್ರಕಾರಗಳಿಂದ ಪ್ರದರ್ಶನ ನಡೆಯಿತು. ಅಲ್ಲದೆ ಕದ್ರಿ ಉದ್ಯಾನವನದಲ್ಲಿ ಸಸಿ ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲೈಮುಹಿಲನ್ , ಸಂಸದ ಬ್ರಿಜೇಶ್ ಚೌಟ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

    Post Views: 220

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.