Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಂತ ವೈದ್ಯಕೀಯ ಪದವೀಧರೆ ಸಂಶಯಾಸ್ಪದ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ದಂತ ವೈದ್ಯಕೀಯ ಪದವೀಧರೆ ಸಂಶಯಾಸ್ಪದ ಸಾವು

    April 17, 2024
    Share

    ಮಂಗಳೂರು: ದಂತವೈದ್ಯಕೀಯ ಪದವಿ ಪೂರೈಸಿ, ಮಂಗಳವಾರದಂದೇ ಕೆಲಸಕ್ಕೆ ಹಾಜರಾಗಬೇಕಿದ್ದ ಬಿಡಿಎಸ್ ಪದವೀಧರೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜಿಯಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ, ದಂತ ಬಿಡಿಎಸ್ ಪದವಿಧರೆ ಸ್ವಾತಿ ಶೆಟ್ಟಿ (24) ಮೃತಪಟ್ಟ ದುರ್ದೈವಿ. ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಎ.16ರಂದು ಕೆಲಸಕ್ಕೆ ಹಾಜರಾಗಬೇಕಿತ್ತು. ನಿನ್ನೆಯಷ್ಟೇ ತಾಯಿಯೊಂದಿಗೆ ಬಂದು ಪಾಂಡೇಶ್ವರ ಕ್ಲಿನಿಕ್ ನಲ್ಲಿ ಕೆಲಸದ ಬಗ್ಗೆ ಮಾತನಾಡಿ, ಅಲ್ಲಿಯೇ ಪಿಜಿಯಲ್ಲಿ ಉಳಿದುಕೊಂಡಿದ್ದರು. ರಾತ್ರಿ ತಾಯಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದ ಸ್ವಾತಿ ಶೆಟ್ಟಿ, ವಿಪರೀತ ತಲೆನೋವು ಎಂದು ಹೇಳಿದ್ದರು. ಬಳಿಕ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದರು. ಮಲಗಿದ್ದ ಸ್ವಾತಿಯ ದೇಹ ಬೆಳಗ್ಗೆ ತಣ್ಣಗಾಗಿದ್ದನ್ನು ನೋಡಿ ಪಿಜಿಯಲ್ಲಿದ್ದ ಇತರರು ಪಿಜಿಯ ಸೂಪರ್ ವೈಸರ್ ಗಮನಕ್ಕೆ ತಂದಿದ್ದಾರೆ. ತಕ್ಷಣ ಆಕೆಯನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆ ಮೃತಪಟ್ಟಿದ್ದಾಳದು ವೈದ್ಯರು ತಿಳಿಸಿದ್ದರು. ಸ್ವಾತಿ ಶೆಟ್ಟಿ ಬಾಯಲ್ಲಿ ನೊರೆ ಬಂದಿತ್ತು ಎಂದು ಜೊತೆಗಿದ್ದವರು ತಿಳಿಸಿದ್ದರು. ಫಿಟ್ಸ್ ಕಾಯಿಲೆ ಇದ್ದಿರುವ ಬಗ್ಗೆ ಮನೆಯವರು ತಿಳಿಸಿದ್ದಾರೆ. ಘಟನೆ ಬಗ್ಗೆ ಮನೆಮಂದಿ ಸಂಶಯ ವ್ಯಕ್ತಪಡಿಸಿಲ್ಲ. ಸಹಜ ಸಾವು ಆಗಿರಬಹುದೆಂದು ಮನೆಯವರು ದೂರು ಕೊಟ್ಟಿಲ್ಲ ಎನ್ನಲಾಗಿದೆ.

    Post Views: 230

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.