Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ಕರಾವಳಿ ಉತ್ಸವ-ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ
    ಇತ್ತೀಚಿನ ಸುದ್ದಿ

    ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ಕರಾವಳಿ ಉತ್ಸವ-ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ

    November 18, 2025
    Share

    ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮ ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದ್ದಾರೆ.

    ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕøತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಬೀಚ್ ಉತ್ಸವ, ಕಲಾ ಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

    ಲಾಲ್ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಬೈಕ್ ಮತ್ತು ಕಾರು ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಪಿಲಿಕುಳದಲ್ಲಿಯೂ ಕರಾವಳಿ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ಸಿದ್ಧತೆಗಳನ್ನು ನಡೆಸುವ ಬಗ್ಗೆ ಒಂದು ವಾರದೊಳಗೆ ವರದಿ ನೀಡಬೇಕು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಕೈಗೊಳ್ಳುವಂತೆ ಅವರು ತಿಳಿಸಿದರು.

    ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ನವ ಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕೋಸ್ಟ್ಗಾರ್ಡ್ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

    ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್ ಎನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು, ವಿವಿಧ ಮುಖಂಡರು ಉಪಸ್ಥಿತರಿದ್ದರು.

    Post Views: 122

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.