ಚಿಕ್ಕಮಗಳೂರು: ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ.
ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.
ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ.ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾ ಧ್ಯಕ್ಷರೇ ಅನ್ನಬೇಕಾ? ಎಂಬತಹ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ. ಇತನ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ನೂತನ ಸರಕಾರದ ಸ್ಪೀಕರ್ ಆಗಿ ಮೊನ್ನೆಯಷ್ಟೇ ಯು ಟಿ ಖಾದರ್ ಸದನದಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದರು.ಖಾದರ್ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.