ಬೆಂಗಳೂರು: ಒಂದೇ ಠಾಣೆಯಲ್ಲಿ ಪೋಲಿಸ್ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಅಂತ ಡಿಜಿ & ಐಜಿಪಿ ಪ್ರವೀಣ್ ಸೂದ್ ಅವರು ಹೇಳಿದ್ದಾರೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಮಾತನಾಡಿ, ಹೆಂಡ್ತಿ ಒಂದು ಕಡೆ ಗಂಡ ಒಂದು ಕಡೆ ಕೆಲಸ ಮಾಡುತ್ತಿದ್ದರೇ ಅದು ಸರಿ ಬರೋದಿಲ್ಲ,. ಈ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಗಮನಕ್ಕೆ ತರಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಅಂತ ತಿಳಿಸಿದರು. ಇನ್ನೂ ಕೆ.ಆರ್.ಪುರಂ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಸಾವು ಬಗ್ಗೆ ತನಿಖೆ ನಡೆಸಲು ಸಿಎಂ ಸೂಚಿಸಿದ್ದಾರೆ ಅಂತ ಅವರು ಹೇಳಿದ್ದು, ಇದೇ ವೇಳೆ ಅವರು ಈ ಬಗ್ಗೆ ನಾವು ಇಲಾಖೆ ಮಟ್ಟದಲ್ಲಿ ತನಿಖೆ ಮಾಡುತ್ತೇವೆ. ಪ್ರಕರಣದ ತನಿಖೆ ಮಾಡಿದ ವರದಿ ಸಲ್ಲುತ್ತೇವೆ ಅಂತ ಇದೇ ವೇಳೆ ತಿಳಿಸಿದರು.