Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ : ಎಸ್ಐಟಿ ನೋಟಿಸ್ ನೀಡಿ ಕೆಲವರ ವಿಚಾರಣೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ : ಎಸ್ಐಟಿ ನೋಟಿಸ್ ನೀಡಿ ಕೆಲವರ ವಿಚಾರಣೆ

    September 23, 2025
    Share

    ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಪ್ರಕರಣದ ಆರೋಪಿ ಮಂಡ್ಯದ ಚಿನ್ನಯ್ಯ ಸಿ.ಎನ್‌. ಮತ್ತು ಆತನ ಪತ್ನಿ ಮಲ್ಲಿಕಾ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ತಿಮರೋಡಿ ಮಹೇಶ್‌ ಶೆಟ್ಟಿಯ ಆಪ್ತರಲ್ಲಿ ಓರ್ವರಾದ ಗುತ್ತಿಗೆದಾರ ಉಜಿರೆ ನಿವಾಸಿ ನಿತಿನ್‌ ಯಾನೆ ನೀತು ಅವರನ್ನು ಎಸ್‌ಐಟಿ ನೋಟಿಸ್‌ ನೀಡಿ ವಿಚಾರಣೆ ಆರಂಭಿಸಿದೆ.

    ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಿದ ಬಗ್ಗೆ ಎಸ್‌ಐಟಿ ದಾಖಲೆ ಮುಂದಿಟ್ಟು ವಿಚಾರಣೆ ಮಾಡಿದಾಗ ಹಣ ವರ್ಗಾವಣೆ ಮಾಡಿದ್ದನ್ನು ನಿತಿನ್‌ ಒಪ್ಪಿಕೊಂಡಿದ್ದಾನೆ. ಹೀಗಾಗಿ ಆತನ ಮೊಬೈಲನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಣ ವರ್ಗಾವಣೆ ವಿಚಾರವಾಗಿ ಈಗಾಗಲೇ ಹಲವು ವದಂತಿಗಳು ಸೃಷ್ಟಿಯಾಗಿದ್ದು, ನಗದು ರೂಪದಲ್ಲಿ ಹಲವು ಲಕ್ಷ ರೂ. ಮತ್ತು 3 ಲಕ್ಷ ರೂ. ಹಂತಹಂತವಾಗಿ ಬ್ಯಾಂಕ್‌ ಮೂಲಕ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಅದರಂತೆ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಿದ ವಿಚಾರವಾಗಿ ದಾಖಲೆಗಳು ಎಸ್‌ಐಟಿಗೆ ಲಭಿಸಿದ್ದರಿಂದ ಮಹೇಶ್‌ ಶೆಟ್ಟಿ ತಿಮರೋಡಿಯ ಹಲವಾರು ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ.

    ಇಂದು ಚಿನ್ನಯ್ಯ ಸಾಕ್ಷಿ ಹೇಳಿಕೆ ದಾಖಲು ಧರ್ಮಸ್ಥಳದ ಬಂಗ್ಲೆಗುಡ್ಡೆ ಸುತ್ತಮುತ್ತ ಶವ ಹೂತಿರುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದ ಬುರುಡೆ ಪ್ರಕರಣದ ಆರೋಪಿ ಮಂಡ್ಯದ ಸಿ.ಎನ್‌. ಚಿನ್ನಯ್ಯ ತಪ್ಪೊಪ್ಪಿಗೆ ಹೇಳಿಕೆ ಸೆ.23ಕ್ಕೆ ನ್ಯಾಯಾಲಯ ದಿನ ನಿಗದಿ ಮಾಡಿತ್ತು. ಅದರಂತೆ ಇಂದು ಅವರು ಹೇಳಿಕೆ ದಾಖಲಿಸಲಿರುವರು.

    ಮತ್ತೆ ತಿಮರೋಡಿ ಗೈರು ಅಕ್ರಮ ಶಸ್ತ್ರಾಸ್ತ್ರ ದಾಸ್ತಾನು ಕಾಯ್ದೆಯಡಿ ಈಗಾಗಲೇ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಎರಡು ಬಾರಿ ನೋಟಿಸ್‌ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ತಲೆಮರೆಸಿಕೊಂಡಿದ್ದಾರೆ. ಸೆ.23ರೊಳಗೆ ವಿಚಾರಣೆಗೆ ಹಾಜರಾಗಲು ಗಡುವು ನೀಡಿದ್ದು, ಈ ವಿಚಾರವಾಗಿ ನ್ಯಾಯಾಲಯದಿಂದ ಜಾಮೀನು ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

    Post Views: 147

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.