Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

    November 12, 2025
    Share

     ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ.

    ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್‌ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್‌ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು.

    ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾರೆ. ಆರಂಭದಲ್ಲಿ ಸಾಕ್ಷಿಗಳಾಗಿ ಅರ್ಜಿದಾರರ ಪ್ರಚೋದನೆ ನಡೆಸಲಾಗಿತ್ತು. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಯಿತು. ಆನಂತರ ಆರೋಪ ಬಹುತೇಕ ಸುಳ್ಳೆಂದು ದೃಢಪಟ್ಟ ಹಿನ್ನೆಲೆಯಲ್ಲಿ ದೂರುದಾರರನ್ನು ಆರೋಪಿಗಳನ್ನಾಗಿ ಮಾಡಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ್ದ ನ್ಯಾಯಪೀಠ ಎಸ್ಐಟಿ ತನಿಖೆಗೆ ತಡೆ ನೀಡಿ ಆದೇಶಿಸಿತ್ತು

    Post Views: 87

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.